ಭಾರತೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಆಯೋಜಕತ್ವದ INSPIRE AWARD MANAK ಸ್ಪರ್ಧೆಯಲ್ಲಿ ಹೆಬ್ರಿಯ ಎಸ್.ಆರ್ ಪಬ್ಲಿಕ್ ಸ್ಕೂಲಿನ(ಸಿಬಿಎಸ್ಇ) ವಿದ್ಯಾರ್ಥಿಯಾದ 9ನೇ ತರಗತಿಯ ವಿನೀಶ್ ಆಚಾರ್ಯ ಅವರು (PaperPro Sustaina Bot), ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಿದ್ಧಪಡಿಸಿದ ವಿಜ್ಞಾನ ಮಾದರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ಉಡುಪಿ ಜಿಲ್ಲೆಯ ಖಾಸಗಿ ಶಾಲೆಗಳ ಪೈಕಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಏಕೈಕ ವಿದ್ಯಾರ್ಥಿ
ಸಾಧಕ ವಿದ್ಯಾರ್ಥಿಯನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ.ಎನ್ ಶೆಟ್ಟಿ ಅವರು ಅಭಿನಂದಿಸಿದ್ದಾರೆ.



