Thursday, September 24, 2026
Homeಹೆಬ್ರಿಹೆಬ್ರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ.

ಹೆಬ್ರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ.

ಹೆಬ್ರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುಧವಾರ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಸೀತಾನದಿ ವಿಠ್ಠಲ ಶೆಟ್ಟಿ ಅವರು ಇಂದಿನ ಸ್ವಾಸ್ಥ್ಯ ಸಮಾಜದಲ್ಲಿ ಆರೋಗ್ಯವಾಗಿ ಇದ್ದಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ, ಮದ್ಯಪಾನ ಬೀಡಿ ಸಿಗರೇಟು ಗುಟುಕ ಜರ್ದ ಅಫೀಮು ಗಾಂಜಾ ಇನ್ನಿತರ ಮಾದಕ ವಸ್ತುಗಳಿಂದ ದೂರವಿರಬೇಕು ಮಾದಕ ವಸ್ತುಗಳಿಂದ ಆರೋಗ್ಯ ಹಾಳಾಗುವುದರ ಜೊತೆಗೆ ಸಂಬಂಧಗಳು ದೂರವಾಗುತ್ತದೆ, ಕುಟುಂಬದ ಆರ್ಥಿಕ ಸ್ಥಿತಿಗತಿ ದುಸ್ಥಿತಿಗೆ ಬಂದು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಅದರ ಜೊತೆಗೆ ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುತ್ತದೆ ಹಾಗಾಗಿ ಮಕ್ಕಳು ದುಶ್ಚಟಗಳಿಂದ ದೂರ ಇರಬೇಕು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್ ಮಾತನಾಡಿ ಇಂದಿನ ಮಕ್ಕಳು ಮುಂದಿನ ದೇಶದ ಆಸ್ತಿ, ಅತಿ ಹೆಚ್ಚು ಮೊಬೈಲ್ ಬಳಸುವುದು ಕೂಡ ದುಶ್ಚಟ, ಹಾಗಾಗಿ ಹೆಚ್ಚು ಓದುವುದರ ಬಗ್ಗೆ ಗಮನಕೊಟ್ಟಲ್ಲಿ ಬದುಕು ಸಾರ್ಥಕವಾಗುತ್ತದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಉದಯ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಚಾಲಕಿಯಾಗಿರುವ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸುಷ್ಮಾ ರಾವ್ ಕೆ, ಐ.ಕ್ಯು.ಎ.ಸಿ ಸಂಚಾಲಕ ಡಾ. ಗಣೇಶ್ ಎಸ್, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮನೋಜ್ ಕುಮಾರ್, ರೆಡ್ ರಿಬ್ಬನ್ ಹಾಗೂ ಎನ್ ಎಸ್ ಎಸ್ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ, ಸೇವಾ ಪ್ರತಿನಿಧಿ ಕಾಂತಿ ಹೆಗ್ಡೆ, ನಾಗರತ್ನ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!