Saturday, September 26, 2026
Homeಹೆಬ್ರಿಹೆಬ್ರಿ ಅಮೃತ ಭಾರತಿ ವಿದ್ಯಾರ್ಥಿ ಗಳಿಂದ " ನಮಾಮಿ ಭಾರತಂ " ವಂದೇ ಮಾತರಂ ಸಾಮೂಹಿಕ...

ಹೆಬ್ರಿ ಅಮೃತ ಭಾರತಿ ವಿದ್ಯಾರ್ಥಿ ಗಳಿಂದ ” ನಮಾಮಿ ಭಾರತಂ ” ವಂದೇ ಮಾತರಂ ಸಾಮೂಹಿಕ ಗಾಯನ.

ಹೆಬ್ರಿ : ಹೆಬ್ರಿ ಅಮೃತ ಭಾರತಿ ವಿದ್ಯಾಲಯದಲ್ಲಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ರಾಷ್ಟ್ರ ಮಟ್ಟದಲ್ಲಿ ಆಯೋಜಿಸಿದ ವಂದೇ ಮಾತರಂ 150 ವರ್ಷಾಚರಣೆಯ ಸಂದರ್ಭದಲ್ಲಿ” ನಮಾಮಿ ಭಾರತಂ ”

ವಂದೇ ಮಾತರಂ ಸಾಮೂಹಿಕ ಗಾಯನ ಶುಕ್ರವಾರ ಆಚರಿಸಲಾಯಿತು. ಸಂಸ್ಥೆ ಹೈಸ್ಕೂಲ್ ಮತ್ತು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಗುರೂಜಿ ಮಾತಾಜಿಯವರು ಸಾಮೂಹಿಕವಾಗಿ ವಂದೇ ಮಾತರಂ ಗೀತೆಯನ್ನು ಹಾಡಿದರು.ವಿದ್ಯಾಭಾರತಿ ಶೈಕ್ಷಣಿಕ ಸಂಯೋಜಿತ ಸಂಸ್ಥೆಯವರು ವಂದೇ ಮಾತರಂ ಸಾಮೂಹಿಕ ಗಾಯನ ಹಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶಕುಂತಲಾ, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಕಾರ್ಯಾಕಾರಿಣಿ ಕಾರ್ಯದರ್ಶಿ ಮಹೇಶ್ ಹೈಕಾಡಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!