Saturday, September 26, 2026
Homeಹೆಬ್ರಿಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಎನ್‌ಎಸ್‌ಎಸ್ ದಿನಾಚರಣೆ -...

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಎನ್‌ಎಸ್‌ಎಸ್ ದಿನಾಚರಣೆ – ಪ್ರಥಮ ವರ್ಷದ ಸ್ವಯಂಸೇವಕರ ಅಭಿವಿನ್ಯಾಸ ಕಾರ್ಯಕ್ರಮ.

ಹೆಬ್ರಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಹೆಬ್ರಿಯ ಐಕ್ಯುಎಸಿ ಹಾಗೂ ಎನ್‌ಎಸ್‌ಎಸ್ ಘಟಕದ ವತಿಯಿಂದ ಎನ್‌ಎಸ್‌ಎಸ್ ದಿನಾಚರಣೆ ಹಾಗೂ ಪ್ರಥಮ ವರ್ಷದ ಎನ್‌ಎಸ್‌ಎಸ್ ಸ್ವಯಂಸೇವಕರಿಗಾಗಿ ಅಭಿವಿನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿದ್ಯಾಧರ ಹೆಗ್ಡೆ ಎಸ್. ಅವರು ಮಾತನಾಡಿ, ವಿದ್ಯಾರ್ಥಿಗಳು ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಅವರ ವ್ಯಕ್ತಿತ್ವ ವಿಕಸನದ ಜೊತೆಗೆ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಹೇಳಿದರು. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ನಿವೇದಿತ ಜೈನ್ ಅವರು ಮಾತನಾಡಿ, ಎನ್‌ಎಸ್‌ಎಸ್ ಸ್ವಯಂಸೇವಕರು ಸಮಾಜ ಸೇವೆಯ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು. ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆತ್ಮವಿಶ್ವಾಸ, ನಾಯಕತ್ವ ಹಾಗೂ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ಪ್ರವೀಣ್ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಎನ್‌ಎಸ್‌ಎಸ್ ಘಟಕದ ನಾಯಕಿ ಅಸ್ಪಿಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಎನ್‌ಎಸ್‌ಎಸ್ ಕಾರ್ಯದರ್ಶಿ ಪ್ರಗತಿ ಎನ್. ವಂದಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‌ಎಸ್‌ಎಸ್‌ನ ಹಿರಿಯ ಹಾಗೂ ಕಿರಿಯ ಸ್ವಯಂಸೇವಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!