ನವಜೀವನ ಸಮಿತಿ ಸದಸ್ಯರಿಂದ ಉತ್ಸಾಹಭರಿತ ಭಾಗವಹಿಸುವಿಕೆ – ವಿವಿಧ ಆಟೋಟ ಸ್ಪರ್ಧೆಗಳ ಆಯೋಜನೆ
ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನಲ್ಲಿ ನವಜೀವನೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಯಿತು.
ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರಾಜ್ ಶೆಟ್ಟಿ ಅವರು ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹೆಬ್ರಿ ತಾಲ್ಲೂಕು ಯೋಜನಾಧಿಕಾರಿ ರೇಷ್ಮಾ ಮಾತನಾಡಿ ನವಜೀವನ ಸಮಿತಿಯ ಉದ್ದೇಶ, ಕಾರ್ಯಚಟುವಟಿಕೆಗಳು ಹಾಗೂ ಸದಸ್ಯರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.
ನವಜೀವನ ಸಮಿತಿಯ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ನವಜೀವನ ಸಮಿತಿಯ ಸದಸ್ಯರಲ್ಲಿ ಆತ್ಮವಿಶ್ವಾಸ, ಪರಸ್ಪರ ಬಾಂಧವ್ಯ, ಸಹಕಾರ ಹಾಗೂ ಸಂಘಟನಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ತಾಲ್ಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ವಾದಿರಾಜ ಶೆಟ್ಟಿ, ಜನಜಾಗೃತಿ ವಲಯ ಅಧ್ಯಕ್ಷರು, ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗರಾಜ ಶೆಟ್ಟಿ, ಸಂತೆಕಟ್ಟೆ ಮದ್ಯವರ್ಜನ ಶಿಬಿರದ ಅಧ್ಯಕ್ಷರು, ಉಪಾಧ್ಯಕ್ಷರು, ಸಮಿತಿ ಸದಸ್ಯರು, ತಾಲೂಕು ಯೋಜನಾಧಿಕಾರಿ ಹಾಗೂ ವಲಯದ ಅಧ್ಯಕ್ಷರು ಉಪಸ್ಥಿತರಿದ್ದರು.



