Sunday, October 18, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಮೂಲ ಸೌಕರ್ಯ - ಸ್ವಚ್ಛತಾ ವ್ಯವಸ್ಥೆ ಸುಧಾರಣೆ ಮಾಡಿ...

ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಮೂಲ ಸೌಕರ್ಯ – ಸ್ವಚ್ಛತಾ ವ್ಯವಸ್ಥೆ ಸುಧಾರಣೆ ಮಾಡಿ : ಮುದ್ರಾಡಿ ಮಂಜುನಾಥ ಪೂಜಾರಿ.

ಮುದ್ರಾಡಿ : ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವುದು ಹಾಗೂ ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣವನ್ನು ನಿರ್ಮಿಸುವ ನಿಟ್ಟಿನಲ್ಲಿ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರು ಮಂಗಳವಾರ ನಡೆದ ಗ್ರಾಮಸಭೆಯಲ್ಲಿ ಮನವಿ ನೀಡಿ ಆದ್ಯತೆಯಲ್ಲಿ ಪರಿಗಣಿಸುವಂತೆ ಸೂಚಿಸಿದರು.

ಮುದ್ರಾಡಿ ಪೇಟೆಯಲ್ಲಿನ ಸಾರ್ವಜನಿಕ ಶೌಚಾಲಯವನ್ನು ವಿಸ್ತರಣೆ ಮಾಡುವುದು ಹಾಗೂ ತಾಂತ್ರಿಕವಾಗಿ ಅಭಿವೃದ್ಧಿಪಡಿಸುವುದು, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿ, ಲಭ್ಯವಿರುವ ಅನುದಾನವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಹಾಗೂ ಅನುದಾನ ಪೋಲಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದು, ಗ್ರಾಮದಲ್ಲಿ ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಉತ್ತೇಜಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಸೂಕ್ತ ಪ್ರಚಾರ ಕೈಗೊಳ್ಳುವುದು ಹಾಗೂ ಅಗತ್ಯ ಅನುದಾನವನ್ನು ಮೀಸಲಿಡುಲು ಕ್ರಮ ಕೈಗೊಳ್ಳುವುದು., ಗ್ರಾಮ ಹಾಗೂ ಪೇಟೆ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಆದ್ಯತೆ ನೀಡಿ, ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಂಗಡಿಸಿ ಸಂಗ್ರಹಿಸುವುದು ಹಾಗೂ ಪುನರ್‌ಬಳಕೆ ಮಾಡಬಹುದಾದ ತ್ಯಾಜ್ಯವನ್ನು ಪುನರ್‌ಬಳಕೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರುವುದು, ಪೇಟೆ ಪ್ರದೇಶದಲ್ಲಿರುವ ಚರಂಡಿಗಳನ್ನು ಪರಿಶೀಲಿಸಿ, ಅಗತ್ಯವಿರುವ ಕಡೆ ದುರಸ್ತಿ ಹಾಗೂ ಸ್ವಚ್ಛತಾ ಕಾಮಗಾರಿಗಳನ್ನು ಕೈಗೊಳ್ಳುವುದು ಸೇರಿದಂತೆ ಹಲವು ವಿಚಾರಗಳನ್ನು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಪರಿಗಣಿಸಿ, ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಲಭ್ಯವಿರುವ ಅನುದಾನ ಹಾಗೂ ನಿಯಮಾನುಸಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಂಜುನಾಥ ಪೂಜಾರಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!