Sunday, October 18, 2026
Homeಕಾರ್ಕಳಹಿರ್ಗಾನ : ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಹಿರ್ಗಾನ : ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಕಾರ್ಕಳ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಹಿರ್ಗಾನ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಹಿರ್ಗಾನದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದುರ್ಗಮ ದಾರಿ ಕ್ರಮಿಸಿ ನದಿಗೆ ತೆರಳಿದ್ದರು. ಈ ವೇಳೆ ಆಳವಾದ ನೀರಿಗೆ ತೆರಳಿದ ಭರತ್ ಹಾಗೂ ಹರ್ಷನ್ ಮುಳುಗಿದ್ದಾರೆ ಎನ್ನಲಾಗಿದೆ.

ವಾಹನ ಸಂಚಾರಕ್ಕೆ ದಾರಿ ಇಲ್ಲದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಮೂರು ಕಿ.ಮೀ. ನಡೆದು ಘಟನಾ ಸ್ಥಳಕ್ಕೆ ತೆರಳಿ, ಸ್ಥಳೀಯರ ಸಹಕಾರದೊಂದಿಗೆ ಮೂರು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದರು. ಠಾಣಾಧಿಕಾರಿ ಸಂಜೀವ ದೇವಾಡಿಗ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಭರತ್ ಪೇಂಟಿಂಗ್ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದು, ಸ್ವಂತ ಮನೆ ನಿರ್ಮಾಣದ ಕನಸು ಕಂಡಿದ್ದರು. ಮನೆಯ ಕಾಮಗಾರಿ ಸ್ಲಾಬ್ ಹಂತ ತಲುಪಿದ್ದು, ಶೀಘ್ರವೇ ಗೃಹ ಪ್ರವೇಶ ಮಾಡುವ ನಿರೀಕ್ಷೆಯಲ್ಲಿದ್ದರು. ಆದರೆ ವಿಧಿಯ ಕ್ರೂರ ಆಟಕ್ಕೆ ಯುವಕ ಬಲಿಯಾಗಿರುವುದು ಕುಟುಂಬಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!