Sunday, October 18, 2026
Homeಕಾರ್ಕಳಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಜನರಲ್ಲಿ ಆತಂಕ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಜನರಲ್ಲಿ ಆತಂಕ

ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)ನ 3ನೇ ಹಂತದ CST ಪ್ಲಾಂಟ್‌ನಲ್ಲಿ ಇಂದು ಮಧ್ಯಾಹ್ನ ಸುಮಾರು 12:30ಕ್ಕೆ ಭಾರೀ ಸ್ಫೋಟ ಸಂಭವಿಸಿದೆ.

ಸ್ಫೋಟದ ಬಳಿಕ ಘಟನಾ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡು ಆಕಾಶದೆತ್ತರಕ್ಕೆ ಹೊಗೆ ಆವರಿಸಿದೆ. ಸ್ಫೋಟದ ತೀವ್ರತೆಗೆ ಜೋಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಮನೆಗಳು ಕಂಪಿಸಿದ್ದು, ಹಲವು ಮನೆಗಳ ಬಾಗಿಲು ಹಾಗೂ ಕಿಟಕಿಗಳ ಗಾಜುಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಧಾವಿಸಿದ್ದು, ಅವಘಡದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!