Sunday, October 18, 2026
Homeಹೆಬ್ರಿಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ...

ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಉಚಿತ ನೇತ್ರ ತಪಾಸಣಾ ಶಿಬಿರ.

ಹೆಬ್ರಿ : ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ವಿಜೇಂದ್ರ ಶೆಟ್ಟಿ ಸೀತಾನದಿ ವಹಿಸಿದ್ದರು. ಹೆಬ್ರಿ ಸಿಟಿ ಲಯನ್ಸ್ ಅಧ್ಯಕ್ಷ ಹರೀಶ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಶಾಲೆಯ ಎಲ್ಲಾ ಮಕ್ಕಳ ಕಣ್ಣುಗಳನ್ನು ತಪಾಸಣೆ ಮಾಡಲಾಯಿತು. ಶಿಬಿರದ ಪ್ರಯೋಜನವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆದುಕೊಂಡರು.
ಇದೇ ಶುಭ ಸಂದರ್ಭದಲ್ಲಿ ಮದಗ ಫೌಂಡೇಶನ್ (ರಿ) ಹೆಬ್ರಿ ಇವರ ವತಿಯಿಂದ ಶಾಲೆಗೆ ಕಸ ವಿಂಗಡಣೆಯ ಕಿಟ್ ಹಾಗೂ ಸ್ವಚ್ಛತಾ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು.

ಕಾಲೇಜಿನ ಉಪ ಪ್ರಾಂಶುಪಾಲ ದಿವಾಕರ ಮರಕಾಲ, ಲಯನ್ಸ್ ಹಿರಿಯರಾದ ಟಿ.ಜಿ. ಆಚಾರ್ಯ, ಲಯನ್ಸ್‌ ಕಾರ್ಯದರ್ಶಿ ರಘುರಾಮ ಶೆಟ್ಟಿ, ನಾಗೇಶ ನಾಯಕ್, ವೈದ್ಯರಾದ ಡಾ. ಟ್ರೀನಾ, ಪ್ರಸಾದ್ ನೇತ್ರಾಲಯದ ಪಿ.ಆರ್.ಒ ಮೋಹನ್ ದಾಸ್ ಉಪಸ್ಥಿತರಿದ್ದರು. ಪ್ರವೀಣ ಕುಮಾರ ಶೆಟ್ಟಿ ನಿರೂಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!