Monday, October 19, 2026
Homeಹೆಬ್ರಿಅಕ್ಟೋಬರ್‌ 07 - ಹೆಬ್ರಿಯಲ್ಲಿ ದುಶ್ಚಟ ಮುಕ್ತ ಸಮಾಜಕ್ಕಾಗಿ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಜಾಥಾ.

ಅಕ್ಟೋಬರ್‌ 07 – ಹೆಬ್ರಿಯಲ್ಲಿ ದುಶ್ಚಟ ಮುಕ್ತ ಸಮಾಜಕ್ಕಾಗಿ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಜಾಥಾ.

ತಾಣ ಶ್ರೀ ಅರ್ಧನಾರೀಶ್ವರ ದೇವಸ್ಥಾನದಿಂದ ಬೃಹತ್ ಜನಜಾಗೃತಿ ಜಾಥಾ.

ಹೆಬ್ರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಹೆಬ್ರಿ ಮತ್ತು ಬ್ರಹ್ಮಾವರ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹೆಬ್ರಿ ಬ್ರಹ್ಮಾವರ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹೆಬ್ರಿ ಬ್ರಹ್ಮಾವರ ತಾಲ್ಲೂಕು, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಸಿಂಡಿಕೇಟ್‌ ವ್ಯವಸಾಯ ಸೇವಾ ಸಹಕಾರಿ ಸಂಘ ಕೊಕ್ಕರ್ಣೆ ಇದರ ಸಹಯೋಗದಲ್ಲಿ ಹೆಬ್ರಿ ಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಮತ್ತು ಜನಜಾಗೃತಿ ಜಾಥಾ ಇದೇ 07 ರಂದು ಬೆಳಗ್ಗಿನಿಂದ ನಡೆಯಲಿದೆ. ಶಾಸಕ ಸುನೀಲ್‌ ಕುಮಾರ್‌ ಉದ್ಘಾಟಿಸುವರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಹೆಬ್ರಿ ತಾಲ್ಲೂಕು ಅಧ್ಯಕ್ಷ ವಾದಿರಾಜ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮೂಡುಗಿಳಿಯಾರು ಬ್ರಹ್ಮಾವರದ ಜನಸೇವಾ ಟ್ರಸ್ಟ್‌ ಅಧ್ಯಕ್ಷ ವಸಂತ ಗಿಳಿಯಾರು ಆಶಯ ಭಾಷಣ ಮಾಡುವರು. ರಾಜ್ಯದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಉಡುಪಿ ಶಾಸಕ ಯಶ್‌ ಪಾಲ್‌ ಸುವರ್ಣ, ಮುಖಂಡ ಮುನಿಯಾಲು ಉದಯ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ ಸಿ ಕುಂದರ್‌, ಉದ್ಯಮಿ ಗಣೇಶ ಕಿಣಿ ಬೆಳ್ವೆ, ಹೆಬ್ರಿ ತಹಶೀಲ್ಧಾರ್‌ ರಾಕೇಶ್‌ ಫ್ರಾನ್ಸಿಸ್‌ ಭ್ರಿಟ್ಟೋ, ಧಾರ್ಮಿಕ ಮುಖಂಡ ಹೆಬ್ರಿ ಭಾಸ್ಕರ ಜೋಯಿಸ್‌, ಹೆಬ್ರಿ ಸಬ್‌ ಇನ್ಸ್‌ ಫೆಕ್ಟರ್‌ ಲೋಹಿತ್‌ ಕುಮಾರ್‌ ಸೇರಿದಂತೆ ಗಣ್ಯರು ಭಾಗವಹಿಸುವರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬ್ರಹ್ಮಾವರ ತಾಲ್ಲೂಕು ಅಧ್ಯಕ್ಷ ಪ್ರಸಾದ್‌ ಹೆಗ್ಡೆ ಮಾರಾಳಿ ಹೆಬ್ರಿ ತಾಣ ಶ್ರೀ ಅರ್ಧನಾರೀಶ್ವರ ದೇವಸ್ಥಾನದಿಂದ ನಡೆಯುವ ಜಾಥಾಕ್ಕೆ ಚಾಲನೆ ನೀಡುವರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!