ಉತ್ತಮ ಮಳೆ ಬೆಳೆ – ಗ್ರಾಮದ ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ
ನಾಡ್ಪಾಲು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗ್ರಾಮ ಸುಭಿಕ್ಷಾ ಕಾರ್ಯಕ್ರಮದ ಅಂಗವಾಗಿ ನಾಡ್ಪಾಲು ಮೇಗದ್ದೆಯ ಶ್ರೀ ಹನುಮಂತ ದೇವರಿಗೆ ಸೀಯಾಳ ಅಭಿಷೇಕ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಶನಿವಾರ ನಡೆಯಿತು. ಗ್ರಾಮದ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಉತ್ತಮ ಮಳೆ ಬೆಳೆ ದೊರೆಯಬೇಕು, ರೈತರು ಹಾಗೂ ಗ್ರಾಮಸ್ಥರ ಬದುಕಿನಲ್ಲಿ ಸುಖ ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ ನೆಲೆಸಬೇಕು, ಗ್ರಾಮದ ಒಳಿತಿಗಾಗಿ ಹಾಗೂ ಸಕಲರ ಕಲ್ಯಾಣಕ್ಕಾಗಿ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಹೆಬ್ರಿ ತಾಲ್ಲೂಕು ಯೋಜನಾಧಿಕಾರಿ ರೇಷ್ಮಾ, ಅಜೆಕಾರು ಹೆಬ್ರಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಹರ್ಷ ಶೆಟ್ಟಿ, ಒಕ್ಕೂಟದ ಅಧ್ಯಕ್ಷ ಬಾಬು ಶೆಟ್ಟಿ ಅಜ್ಜೋಳ್ಳಿ, ವೀರ ಮಾರುತಿ ಭಜನಾ ಮಂಡಳಿಯ ಅಧ್ಯಕ್ಷ ಸತೀಶ್ ಶೆಟ್ಟಿ ಮೇಗದ್ದೆ, ದೇವಸ್ಥಾನದ ಆಡಳಿತ ಮುಖ್ಯಸ್ಥ ಶೇಖರ ಶೆಟ್ಟಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನವೀನ್ ಕುಮಾರ್, ಮೇಲ್ವಿಚಾರಕ ಹೆಚ್. ಉದಯ್ ಕುಲಾಲ್ ಹಾಗೂ ಸೇವಾ ಪ್ರತಿನಿಧಿ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.




