ಮುದ್ರಾಡಿ : ಮುದ್ರಾಡಿಯ ಬಲ್ಲಾಡಿ ಶ್ರೀ ಅರ್ಧನಾರೀಶ್ವರ ಅಬ್ಬಗ ದಾರಗ ದೇವಸ್ಥಾನ, ಶ್ರೀ ಬ್ರಹ್ಮಬೈದರ್ಕಳ ಗರಡಿಯ ಜೀರ್ಣೋದ್ಧಾರ ಕಾರ್ಯಕ್ಕೆ ವಿಜಯದಶಮಿಯ ಶುಭ ಸಂದರ್ಭದಲ್ಲಿ ದೇವರ ಪ್ರಾರ್ಥನೆಯೊಂದಿಗೆ ಚಾಲನೆ ನೀಡಲಾಯಿತು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಜ್ಯದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮುದ್ರಾಡಿ, ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ಶುಭದರ ಶೆಟ್ಟಿ, ರವಿ ಪೂಜಾರಿ, ಜಯಕರ ಶೆಟ್ಟಿ, ದೇವಸ್ಥಾನ ಹಾಗೂ ಗರಡಿಯ ಅರ್ಚಕರು, ಗಣ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.




