ಪಡುಕುಡೂರು : ಕಾರ್ಕಳ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲ್ಲೂಕು ಮಟ್ಟದ 14 ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ಶತಮಾನೋತ್ಸವ ಸಂಭ್ರಮದಲ್ಲಿರುವ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ದೀಕ್ಷಾ ಬಹುದೂರ ಚಕ್ರ ಎಸೆದು ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರು, ಗೌರವ ಸಲಹೆಗಾರರು ,ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಶಾಲಾ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು, ಗೌರವ ಸಲಹೆಗಾರರು ,ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.



