ಕುಚ್ಚೂರು : ಉಡುಪಿ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ, ಜಯರಾಣಿ ಆಂಗ್ಲ ಮಾಧ್ಯಮ ಶಾಲೆ ತಲ್ಲೂರುನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದ 14 ರ ವಯೋಮಾನ ವಿಭಾಗದಲ್ಲಿ ಕುಚ್ಚೂರು ಹೆರ್ಗ ವಿಠಲ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಸ್ಡಿಎಂಸಿ ಅಧ್ಯಕ್ಷ ಹರ್ಷ ಶೆಟ್ಟಿ ಬೇಳಂಜೆ, ಮುಖ್ಯ ಶಿಕ್ಷಕಿ ಪ್ರಭಾವತಿ, ಶಿಕ್ಷಕರಾದ ತುಳಸಿ, ಗಣೇಶ್, ದೈಹಿಕ ಶಿಕ್ಷಣ ಶಿಕ್ಷಕಿ ಕಮಲಿನಿ, ಶಿಕ್ಷಕರು ವಿದ್ಯಾರ್ಥಿಗಳು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.



