Sunday, November 8, 2026
Homeಹೆಬ್ರಿ ಗ್ರಾಮ ಪಂಚಾಯತ್‌ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು‌: 'ಪುಷ್ಪವನ' ಕಾರ್ಯಕ್ರಮ.

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು‌: ‘ಪುಷ್ಪವನ’ ಕಾರ್ಯಕ್ರಮ.

ಹೆಬ್ರಿ : ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಐಕ್ಯುಎಸಿ ಮತ್ತು ಎನ್ ಎಸ್ ಎಸ್ ಸಹಯೋಗದೊಂದಿಗೆ ಶನಿವಾರ ‘ಪುಷ್ಪವನ’ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್ ಮಾತನಾಡಿ ಕಾಲೇಜಿನ ಉದ್ಯಾನವನ ಕಾಲೇಜಿನ ಅಂದವನ್ನು ಹೆಚ್ಚಿಸಿ ಕಲಿಕೆಗೆ ಪೂರಕವಾಗುತ್ತದೆ ಎಂದು ತಿಳಿಸಿ ಕಾಲೇಜಿನ ಉದ್ಯಾನವನದ ಸ್ವಚ್ಛತೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಹಾಗೂ ಎನ್ಎಸ್ಎಸ್ ಸ್ವಯಂಸೇವಕರನ್ನು ಶ್ಲಾಘಿಸಿದರು.

ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯ ಸಂಚಾಲಕಿ ಸುಷ್ಮಾ ರಾವ್, ಐಕ್ಯೂಎಸಿ ಸಂಚಾಲಕ ಡಾ. ಗಣೇಶ್ ಎಸ್, ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ತಾವು ತಂದ  ಹೂವಿನ ಗಿಡಗಳನ್ನು ನೆಟ್ಟರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರವೀಣ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!