ಪಡುಕುಡೂರು : ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಸೋಮವಾರ ಆಚರಿಸಲಾಯಿತು. ಯಕ್ಷಗುರು ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ ಮತ್ತು ಎಸ್ ಡಿಎಂಸಿ ಅಧ್ಯಕ್ಷ ರವಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮಹರ್ಷಿ ವಾಲ್ಮೀಕಿ ಅವರ ಕಾವ್ಯ ಮೌಲ್ಯಗಳ, ಆದರ್ಶಗಳ ಬಗ್ಗೆ ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಹರೀಶ್.ಪೂಜಾರಿ.ಎಸ್, ಶತಮಾನೋತ್ಸವ ಸಮಿತಿ ಅಧ್ಯಕ್ಷ ಭಾರವಿ ಶೆಟ್ಟಿ, ಗೌರವ ಶಿಕ್ಷಕಿ ಶೃತಿ ಮೇಲ್ಮನೆ, ಎಸ್ ಡಿಎಂಸಿ ಮಾಜಿ ಉಪಾಧ್ಯಕ್ಷ ಹರೀಶ್.ಪೂಜಾರಿ, ಅಂಗನವಾಡಿ ಕಾರ್ಯಕರ್ತೆ ಸವಿತಾ ಶೆಟ್ಟಿ, ಶಾಲಾ ನಾಯಕಿ ಅನನ್ಯಾ, ಉಪನಾಯಕ ರಕ್ಷಕ್ ಶೆಟ್ಟಿ, ಶಾಲಾಭಿವೃದ್ಧಿ ಸದಸ್ಯರು, ಪೋಷಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪಡುಕುಡೂರು : ವಾಲ್ಮೀಕಿ ಜಯಂತಿ.



