Sunday, November 8, 2026
Homeಹೆಬ್ರಿ ಗ್ರಾಮ ಪಂಚಾಯತ್‌ಹೆಬ್ರಿ ಅಮೃತ ಭಾರತಿ ಸಮೂಹ ಸಂಸ್ಥೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

ಹೆಬ್ರಿ ಅಮೃತ ಭಾರತಿ ಸಮೂಹ ಸಂಸ್ಥೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

ಹೆಬ್ರಿ : ಹೆಬ್ರಿಯ ಅಮೃತ ಭಾರತಿ ಸಮೂಹ ಸಂಸ್ಥೆಗಳಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮ ಮತ್ತು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಪ್ರಾಂಶುಪಾಲ ಪ್ರಕಾಶ್ ಜೋಗಿ, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸಲಾಯಿತು.

“ವಾಲ್ಮೀಕಿ ಮಹರ್ಷಿಗಳು ಬರೆದ ರಾಮಾಯಣ ಕೇವಲ ಧಾರ್ಮಿಕ ಗ್ರಂಥವಲ್ಲ, ಅದು ಜೀವನ ಮೌಲ್ಯಗಳ ಸಾರ. ರಾಮಾಯಣದಲ್ಲಿ ತ್ಯಾಗ, ಸತ್ಯ, ಧರ್ಮ ಮತ್ತು ಕರ್ತವ್ಯದ ಪಾಠವಿದೆ. ವಿದ್ಯಾರ್ಥಿಗಳು ಇಂತಹ ಮಹಾನ್ ಗ್ರಂಥಗಳನ್ನು ಓದಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಾಲ್ಮೀಕಿ ಅವರಂತಹ ಮಹರ್ಷಿಗಳ ಜಯಂತಿ ಆಚರಣೆ ನಮಗೆಲ್ಲರಿಗೂ ಸ್ಫೂರ್ತಿದಾಯಕ” ಎಂದು ಪ್ರಾಂಶುಪಾಲ ಪ್ರಕಾಶ್ ಜೋಗಿ ಹೇಳಿದರು.

ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ವಿಭಾಗಗಳ ಮುಖ್ಯಸ್ಥರು, ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಪದವಿ ಪೂರ್ವ ಕಾಲೇಜು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ವೇತಾ ನಿರೂಪಿಸಿ ವಂದಿಸಿದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!