ಪಡುಕುಡೂರು : ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರು ಬೀಡು ಎಂ.ಡಿ.ಅಧಿಕಾರಿ ಪುತ್ಥಳಿ ಪ್ರತಿಷ್ಠಾಪನಾ ಸಮಿತಿಯ ಪ್ರಧಾನ ಸಂಚಾಲಕರಾದ ಎಂ.ಡಿ.ಅಧಿಕಾರಿ ಯೂತ್ ಕ್ಲಬ್ ಮತ್ತು ಶತಮಾನೋತ್ಸವ ಸಂಭ್ರಮದಲ್ಲಿರುವ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರು, ಸಮಾಜ ಸೇವಕ ಮುಂಬೈ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಪಡುಕುಡೂರು ಪಡುಪರ್ಕಳ ಹರೀಶ ಶೆಟ್ಟಿ ಅವರ ಹುಟ್ಟು ಹಬ್ಬವು ಅಕ್ಟೋಬರ್ ೨೯ ರಂದು ನಡೆಯಲಿದೆ.

ಹುಟ್ಟು ಹಬ್ಬದ ಪ್ರಯುಕ್ತ ಶತಮಾನೋತ್ಸವ ಸಂಭ್ರಮದಲ್ಲಿರುವ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಟೋಬರ್ 29 ರಂದು ಗುರುವಾರ ಬೆಳಿಗ್ಗೆ ರಕ್ತದಾನ ಶಿಬಿರ ನಡೆಯಲಿದೆ.
ಹರೀಶ್ ಶೆಟ್ಟಿ ಅಭಿಮಾನಿಗಳು, ಸ್ಥಳೀಯ ಗಣ್ಯರು, ಪ್ರಮುಖರು, ಸಂಘಸಂಸ್ಥೆಗಳ ಪ್ರಮುಖರು ಭಾಗವಹಿಸುವರು ಎಂದು ಯೂತ್ ಕ್ಲಬ್ ಅಧ್ಯಕ್ಷ ಸಂದೀಪ್ ಶೆಟ್ಟಿ ಪಟೇಲರಮನೆ ಪಡುಕುಡೂರು ತಿಳಿಸಿದ್ದಾರೆ.



