ಅಕ್ಟೋಬರ್ 30 : ಹೆಬ್ರಿಯ ಹೆಮ್ಮೆಯ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತ!
ಹೆಬ್ರಿ : ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿಧ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟದಲ್ಲಿ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟುಗಳಿಗೆ ಭವ್ಯ ಸ್ವಾಗತ ಕಾರ್ಯಕ್ರಮ ಇಂದು ಅಕ್ಟೋಬರ್ 30 ರಂದು ನಡೆಯಲಿದೆ.
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ವಿಶೇಷ ಸಾಧನೆಗೈದು ಶಾಲೆಗೆ, ಹೆಬ್ರಿ ತಾಲ್ಲೂಕಿಗೆ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿ ತಂದಿರುವುದು ಹೆಮ್ಮೆಯ ವಿಷಯವಾಗಿದ್ದು ಬೆಳಿಗ್ಗೆ ೮:೩೦ಕ್ಕೆ ಮೆರವಣಿಗೆ ನಡೆಯಲಿದೆ.
ಮೆರವಣಿಗೆಯ ಮಾರ್ಗ : ಹೆಬ್ರಿಯ ಹೆಮ್ಮೆಯ ಕ್ರೀಡಾಪಟುಗಳಿಗೆ ಅದ್ದೂರಿ ಸ್ವಾಗತದ ಮೆರವಣಿಗೆ ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಹೆಬ್ರಿಯಿಂದ ಆರಂಭಗೊಂಡು ಶ್ರೀ ಅನಂತಪದ್ಮನಾಭ ದೇವಸ್ಥಾನ, ಹೆಬ್ರಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ತಲುಪಲಿದೆ. ಮೆರವಣಿಗೆ ಮುಗಿದ ತಕ್ಷಣ ಶಾಲಾ ಸಭಾಂಗಣದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನೆರವೇರಲಿದೆ
ಎಲ್ಲಾ ಕ್ರೀಡಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು, ತಾಲ್ಲೂಕಿನ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸಾಧನೆಯನ್ನು ಸಂಭ್ರಮಿಸಿ ಪ್ರೋತ್ಸಾಹ ನೀಡಬೇಕಾಗಿ ಕೋರಿದ್ದಾರೆ. ವಿನಂತಿಸಿಕೊಳ್ಳುತ್ತೇವೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಉಪಪ್ರಾಂಶುಪಾಲರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳು ಹೆಬ್ರಿಯ ಸರ್ಕಾರಿ ಶಾಲೆಯ ಕ್ರೀಡಾತಾರೆಗಳ ಸ್ವಾಗತ ಸಂಭ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.



