ಹೆಬ್ರಿಯ ಎಸ್.ಆರ್. ಶಿಕ್ಷಣ ಸಂಸ್ಥೆ ಮೌಲ್ಯಯುತ, ಗುಣಮಟ್ಟದ ಶಿಕ್ಷಣಕ್ಕೆ ಮಾದರಿ : ರೇಷ್ಮಾ ಎಸ್.
ಹೆಬ್ರಿ : ಹೆಬ್ರಿಯ ಎಸ್.ಆರ್. ಶಿಕ್ಷಣ ಸಂಸ್ಥೆ ಮೌಲ್ಯಯುತ, ಗುಣಮಟ್ಟದ ಶಿಕ್ಷಣಕ್ಕೆ ಮಾದರಿಯಾಗಿದೆ. ವಿವಿಧ ಪ್ರದೇಶದಿಂದ ಶಿಕ್ಷಣಕ್ಕಾಗಿ ಈ ಸಂಸ್ಥೆಯನ್ನು ಅರಸಿ ಬರುತ್ತಿರುವುದು ಇದಕ್ಕೆ ಸಾಕ್ಷಿ. ವಿದ್ಯಾರ್ಥಿಗಳು ಎಸ್ ಆರ್ ಸಂಸ್ಥೆಯ ಸೌಲಭ್ಯಗಳನ್ನು ಬಳಸಿಕೊಂಡು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದಬೇಕು ಎಂದು ಕ್ಷೇತ್ರ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಹೆಬ್ರಿ ತಾಲೂಕು ಯೋಜನಾಧಿಕಾರಿ ರೇಷ್ಮಾ ಎಸ್ ಹೇಳಿದರು.
ಅವರು ಎಸ್.ಆರ್. ಪಬ್ಲಿಕ್ ಸ್ಕೂಲಿನಲ್ಲಿ ನಡೆದ ಕೌಶಲ್ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಅನೇಕ ವರ್ಷಗಳಿಂದಲೂ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅದೆಷ್ಟೋ ಕುಟುಂಬಗಳು ಇವತ್ತು ಆರ್ಥಿಕವಾಗಿ ಸದೃಢತೆ ಪಡೆದುಕೊಂಡಿದೆ. ಇಂತಹ ಸಮಾಜಸೇವೆಯಿಂದ ಜನರ ಬದುಕು ಬೆಳಕಾಗಿದೆ. ಇಂದು ನಮ್ಮ ಸಂಸ್ಥೆಯಲ್ಲಿ ಆಚರಿಸುತ್ತಿರುವ ಕೌಶಲ್ ಮೇಳ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಒಂದು ವೇದಿಕೆ. ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ.ಎನ್ ಶೆಟ್ಟಿ, ಎಸ್ .ಆರ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೋ ಓರ್ಡಿನೇಟರ್ ಅಕ್ಷಿತಾ, ಹೇಮಾ ಮತ್ತು ಶಿಕ್ಷಕರು ಭಾಗವಹಿಸಿದ್ದರು. ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ, ಇನ್ಸ್ಪಾಯರ್ ಮಾನಕ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಭಾಗವಹಿಸಿದ ವಿದ್ಯಾರ್ಥಿ ವಿನೀಶ್ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ನಡೆಸಿದ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಗೆ ಆಯ್ಕೆಯಾದ ಅದಿತಿ, ನಿಧಿ, ಪ್ರಣವು, ಅಸ್ಮಿತ್, ದಿಯಾ ಶೆಟ್ಟಿ, ಶರಣ್ ಅವರನ್ನು ಅಭಿನಂದಿಸಲಾಯಿತು. ಹಾಗೂ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಸಂಬಂಧಿ ಮಾದರಿಗಳ ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳಾದ ಸಾನ್ವಿ ಶೆಟ್ಟಿ ನಿರೂಪಿಸಿ, ಸಿಯಾ ಸ್ವಾಗತಿಸಿ, ಪ್ರಖ್ಯಾತಿ ವಂದಿಸಿದರು.



