Sunday, November 8, 2026
Homeವರಂಗ ಗ್ರಾಮ ಪಂಚಾಯತ್‌ಮುನಿಯಾಲು : ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ.

ಮುನಿಯಾಲು : ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ.

ಮುನಿಯಾಲು : ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಬ್ರಹ್ಮಾವರ ತಾಲೂಕು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆ ಸಹಯೋಗದೊಂದಿಗೆ  ನಡೆದ 14 ಮತ್ತು 17ರ ವಯೋಮಿತಿಯ ಬಾಲಕ ಬಾಲಕಿಯರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ 2026-27ರಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

೮ನೇ ತರಗತಿಯ ದಿಯಾ ಶೆಟ್ಟಿ ಉದ್ದ ಜಿಗಿತ, ಎತ್ತರ ಜಿಗಿತ, 200ಮೀಟರ್ ಓಟ ಸೇರಿ ಮೂರು ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. 7ನೇ ತರಗತಿಯ ಸಾನ್ವಿ ಗುಂಡು ಎಸೆತ ಮತ್ತು ಜಾವಲಿನ್ ಎಸೆತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ೧೦ನೇ ತರಗತಿಯ ಕುಮಾರಿ ಸಾನ್ವಿ ಡಿ ಶೆಟ್ಟಿ ಇ400 ಮೀಟರ್ ಹರ್ಡಲ್ಸ್ ನಲ್ಲಿ  ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಕುಮಾರ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ಭಾರತಿ ಅವರು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!