ಕರ್ಜೆ ( ಬ್ರಹ್ಮಾವರ ) : ಸಮಾಜಸೇವಕ ಹುಬ್ಬಳ್ಳಿ ಧಾರವಾಡದ ಖ್ಯಾತ ಉದ್ಯಮಿ, ಧಾರ್ಮಿಕ ಮುಖಂಡ ಸುಗ್ಗಿ ಸುಧಾಕರ ಶೆಟ್ಟಿಯವರ ಮನೆಗೆ ಆಹಾರ, ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಭಾನುವಾರ ಸೌಹಾರ್ಧ ಬೇಟಿ ನೀಡಿದರು.

ಸುಗ್ಗಿ ಸುಧಾಕರ ಶೆಟ್ಟಿಯವರು ಮತ್ತು ಕುಟುಂಬಸ್ಥರು ಸಚಿವರನ್ನು ಸ್ವಾಗತಿಸಿ ಗೌರವಿಸಿದರು.

ಬಳಿಕ ಸಮಾಜಸೇವಕ ಕರ್ಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಮಹತೋಭಾರ ಬಾರ್ಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಸುಗ್ಗಿ ಸುಧಾಕರ ಶೆಟ್ಟಿ ಅವರೊಂದಿಗೆ ಸಚಿವ ರಿಜ್ವಾನ್ ಅರ್ಷದ್ ಉಭಯ ಕುಶಲೋಪರಿ ವಿಚಾರಿಸಿ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಸೇರಿದ್ದ ನೂರಾರು ಗ್ರಾಮಸ್ಥರು, ಸಾರ್ವಜನಿಕರು, ಮುಖಂಡರು, ಗಣ್ಯರು ಸಚಿವರಿಗೆ ವಿವಿಧ ಅಹವಾಲುಗಳನ್ನು ಸಲ್ಲಿಸಿದ್ದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಉಡುಪಿಯ ಎಂ.ಎ.ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕಾರ್ಕಳದ ಕಾಂಗ್ರೆಸ್ ಯುವ ಮುಖಂಡ ರವಿಶಂಕರ್ ಶೇರಿಗಾರ್, ಸಮಾಜ ಸೇವಕ ಮಿಥುನ್ ಶೆಟ್ಟಿ ಚಾರ ಹೆಬ್ರಿ, ಡಾ.ಸುನೀತಾ ಶೆಟ್ಟಿ ಸೇರಿದಂತೆ ಜಿಲ್ಲೆಯ ಪ್ರಮುಖರು, ವಿವಿಧ ಅಧಿಕಾರಿಗಳು ಹಾಜರಿದ್ದರು.







