Sunday, November 8, 2026
Homeಹೆಬ್ರಿ ಗ್ರಾಮ ಪಂಚಾಯತ್‌ಹೆಬ್ರಿ ಅಮೃತ ಭಾರತಿ ಸಮೂಹ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಹೆಬ್ರಿ ಅಮೃತ ಭಾರತಿ ಸಮೂಹ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಹೆಬ್ರಿ : ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಸಂಸ್ಥೆ ಮಿಥಿಲಾ ನಗರದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಜೋಗಿ ಕನ್ನಡ ನಾಡುನುಡಿಯ ಮಹತ್ವವನ್ನು ತಿಳಿಸಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿದ್ಯಾರ್ಥಿಗಳು ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ಸಂಸ್ಥೆಯ ಮೇಲ್ವಿಚಾರಕ ವಿಜಯ್ ಕುಮಾರ್ ಶೆಟ್ಟಿ, ಉಪನ್ಯಾಸಕರು, ಶಿಕ್ಷಕರು ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!