Monday, November 9, 2026
Homeಹೆಬ್ರಿ ಗ್ರಾಮ ಪಂಚಾಯತ್‌ಹೆಬ್ರಿ ತಾಲ್ಲೂಕು ಆಡಳಿತದಿಂದ ರಾಜ್ಯೋತ್ಸವ ಸಂಭ್ರಮ.

ಹೆಬ್ರಿ ತಾಲ್ಲೂಕು ಆಡಳಿತದಿಂದ ರಾಜ್ಯೋತ್ಸವ ಸಂಭ್ರಮ.

 

ಹೆಬ್ರಿ ರಘುರಾಮ ಸೋಮಯಾಜಿ ಅವರಿಗೆ ರಾಜ್ಯೋತ್ಸವ ಗೌರವ.

ರಘುರಾಮ ಸೋಮಯಾಜಿ ಹೆಬ್ರಿಗೆ ಖ್ಯಾತಿ ತಂದವರು – ಗಣ್ಯರ ಪ್ರಶಂಸೆ.

ಹೆಬ್ರಿ :  ಹೆಬ್ರಿ ತಾಲ್ಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಹೆಬ್ರಿ ತಹಶೀಲ್ಧಾರ್ ರಾಕೇಶ್ ಪ್ರಾನ್ಸಿಸ್ ಬ್ರೀಟ್ಟೋ

ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಹೆಬ್ರಿ ರಘರಾಮ ಸೋಮಯಾಜಿ ಅವರಿಗೆ ರಾಜ್ಯೋತ್ಸವ ಗೌರವ ಪ್ರದಾನ ಮಾಡಲಾಯಿತು. ರಾಜ್ಯೋತ್ಸವ ಗೌರವ ಸ್ವೀಕರಿಸಿ ಮಾತನಾಡಿದ ಹೆಬ್ರಿ ರಘುರಾಮ ಸೋಮಯಾಜಿ ಹೆಬ್ರಿಯವರು ನೀಡಿದ ಪ್ರೀತಿ ಗೌರವ ಅಭಿಮಾನಕ್ಕೆ ಅಭಾರಿಯಾಗಿದ್ದೇನೆ.

ಕರ್ನಾಟಕ ರಾಜ್ಯ ಉದಯವಾದ 1956ರಲ್ಲೇ ಹೆಬ್ರಿ ಸರ್ಕಾರಿ ಪದವಿಪೂರ್ವ ಕಾಲೇಜು ಉದಯವಾಗಿದೆ. ಅದು ಅತ್ಯಂತ ಹೆಮ್ಮೆಯ ಸಂಗತಿ, 68 ವರ್ಷಗಳ ಇತಿಹಾಸವಿದೆ. 1964ರಲ್ಲೇ ಸಂಸ್ಥೆಯಲ್ಲಿ 100% ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ.

ಕನ್ನಡ ಮಾಧ್ಯಮ, ಸರ್ಕಾರಿ ಶಾಲೆ ಮತ್ತು ಬಡವರ ಎಂಬ ಕಿಳರಿಮೆಯನ್ನು ದೂರ ಮಾಡಿ ಸಾಧನೆ ಮಾಡಬೇಕು ಎಂದರು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪೂರ್ಣಾಂಕ ಪಡೆದ ಶ್ರಾವ್ಯ, ಮೋಕ್ಷ ಮತ್ತು ಸಾಕ್ಷಿ ಅವರನ್ನು ಗೌರವಿಸಲಾಯಿತು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೀತಾನದಿ ವಿಜೇಂದ್ರ ಶೆಟ್ಟಿ, ಹೆಬ್ರಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಂಕರ ಶೇರಿಗಾರ್, ಹೆಬ್ರಿ ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ದಿನೇಶ್ ಎ.ಡಿ, ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ

ಡಾ. ವಿದ್ಯಾಧರ ಹೆಗ್ಡೆ, ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುಧಾಕರ ಕೆ.ಜಿ, ಹೆಬ್ರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ ಕುಮಾರ್, ಶಿಕ್ಷಣ ಇಲಾಖೆಯ ಸಿಆರ್ ಪಿ ರಾಘವೇಂದ್ರ, ಹೆಬ್ರಿಯ ವಿವಿಧ ಸಂಘಸಂಸ್ಥೆಯ ಪ್ರಮುಖರಾದ ಎಚ್. ಜನಾರ್ಧನ್, ಸಿ.ಎಂ.ಪ್ರಸನ್ನ ಕುಮಾರ್ ಶೆಟ್ಟಿ ಸೇರಿದಂತೆ ಹಲವರು ಪ್ರಮುಖರು, ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಾಂಶುಪಾಲ ದಿವಾಕರ ಮರಕಾಲ ಎಸ್ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ಕುಲಾಲ್ ನಿರೂಪಿಸಿದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!