Sunday, November 8, 2026
Homeಹೆಬ್ರಿ ಗ್ರಾಮ ಪಂಚಾಯತ್‌ಹೆಬ್ರಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಣೆ.

ಹೆಬ್ರಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಣೆ.

ಹೆಬ್ರಿ : ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ವಿದ್ಯಾರ್ಥಿಗಳೊಂದಿಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಪ್ರಾಂಶುಪಾಲ ಪ್ರಕಾಶ ಜೋಗಿ”560 ಕ್ಕೂ ಹೆಚ್ಚು ಸಂಸ್ಥಾನಗಳನ್ನು ಒಗ್ಗೂಡಿಸಿ ಭಾರತದ ಏಕತೆಗೆ ಅಡಿಪಾಯ ಹಾಕಿದ ಸರ್ದಾರ್ ಪಟೇಲರ ದೂರದೃಷ್ಟಿ ಮತ್ತು ತ್ಯಾಗವನ್ನು ನಾವು ಸ್ಮರಿಸಬೇಕು. ಏಕತೆಯೇ ನಮ್ಮ ದೇಶದ ಶಕ್ತಿ, ಹೆಮ್ಮೆ ಮತ್ತು ಭವಿಷ್ಯ. ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶವಿದು. ಯಾರಲ್ಲಿಯೂ ದ್ವೇಷವನ್ನು ಬೆಳೆಸಿಕೊಳ್ಳದೆ ಪ್ರೀತಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಏಕತಾ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. “ನಮ್ಮ ಆಲೋಚನೆ, ಮಾತು ಮತ್ತು ಕಾರ್ಯಗಳಲ್ಲಿ ಏಕತೆ, ಸಾಮರಸ್ಯ ಮತ್ತು ಭ್ರಾತೃತ್ವದ ಮನೋಭಾವವನ್ನು ಎತ್ತಿ ಹಿಡಿಯೋಣ” ಎಂಬ ಸಂದೇಶವನ್ನು ನೀಡಲಾಯಿತು.

ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!