ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy to Global Rice Techie’ ಕೃತಿ.
ಸಚಿವೆ ನಿರ್ಮಲಾ ಸೀತಾರಾಮನ್ ಮುಂಬೈಯಲ್ಲಿ ಲೋಕಾರ್ಪಣೆ.
ಮೂಡಬಿದ್ರಿಯ ಪ್ರತಿಷ್ಠಿತ ಉದ್ಯಮಿ ಹಾಗೂ ಭತ್ತ ಸಂಸ್ಕರಣಾ ತಂತ್ರಜ್ಞಾನ ಕ್ಷೇತ್ರದ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy to Global Rice Techie’ ಕೃತಿಯನ್ನು ಸೋಮವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ITC Grand Central, ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಅನಾವರಣಗೊಳಿಸಿದರು.




