Sunday, November 8, 2026
Homeಹೆಬ್ರಿ ಗ್ರಾಮ ಪಂಚಾಯತ್‌ನಾಳೆ ಹೆಬ್ರಿಯಲ್ಲಿ ಬೃಹತ್‌ ಪ್ರತಿಭಟನೆ.

ನಾಳೆ ಹೆಬ್ರಿಯಲ್ಲಿ ಬೃಹತ್‌ ಪ್ರತಿಭಟನೆ.

ಉಡುಪಿ ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರು ಸ್ಥಳಕ್ಕೆ ಆಗಮಿಸಬೇಕು.

ತಪ್ಪಿದ್ದಲ್ಲಿ ಹೆದ್ದಾರಿ ತಡೆದು ಹೋರಾಟ : ಶ್ರೀಕಾಂತ್‌ ಪೂಜಾರಿ.

ಹೆಬ್ರಿ : ಹೆಬ್ರಿಯ ಸಾಕಷ್ಟು ಪ್ರಮುಖ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ನವಂಬರ್‌ 05 ರಂದು ಬೆಳಿಗ್ಗೆ ೧೦ ಗಂಟೆಗೆ ಬೃಹತ್ ಸಾರ್ವಜನಿಕ ಪ್ರತಿಭಟನೆ ನಡೆಸಲಿದ್ದೇವೆ. ಈಗಾಗಲೇ ಜಿಲ್ಲೆಯ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ನಮ್ಮ ಪ್ರತಿಭಟನ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರು ಸ್ಥಳಕ್ಕೆ ಆಗಮಿಸಿ ನಮ್ಮ ಮನವಿಯನ್ನು ಸ್ವೀಕರಿಸುವ ತನಕ ಪ್ರತಿಭಟನೆ ನಡೆಯಲಿದೆ. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಆಗಮಿಸಿದೆ ಇದ್ದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಕುಚ್ಚೂರು ಶ್ರೀಕಾಂತ್‌ ಪೂಜಾರಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!