Saturday, November 7, 2026
Homeಹೆಬ್ರಿ ಗ್ರಾಮ ಪಂಚಾಯತ್‌ಹೆಬ್ರಿಗೆ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಆರತಿ ಕೃಷ್ಣ ಭೇಟಿ.

ಹೆಬ್ರಿಗೆ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಆರತಿ ಕೃಷ್ಣ ಭೇಟಿ.

ಹೆಬ್ರಿ : ಕರ್ನಾಟಕ ಸರ್ಕಾರದ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆಯಾದ ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ ಅವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಬಲವರ್ಧನೆ ಹಾಗೂ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಪಕ್ಷದ ಪ್ರಮುಖರೊಂದಿಗೆ ಚರ್ಚೆ ನಡೆಸಿದರು.

ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ನವೀನ್ ಕೆ. ಅಡ್ಯಂತಾಯ, ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಶೆಟ್ಟಿ ಚಾರಾ, ಬ್ಲಾಕ್ ಕಾರ್ಯದರ್ಶಿ ಎಚ್.‌ ಜನಾರ್ದನ, ಪಕ್ಷದ ವಕ್ತಾರರಾದ ನಿತೀಶ್ ಎಸ್.ಪಿ., ಭೂನ್ಯಾಯ ಮಂಡಳಿ ಸದಸ್ಯರಾದ ರಾಘವೇಂದ್ರ ನಾಯ್ಕ್, ಹೆಬ್ರಿ ಕಾಂಗ್ರೆಸ್ ಅಧ್ಯಕ್ಷ ಸಂದೀಪ್ ಆಚಾರ್ಯ, ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯರಾದ ಸಂತೋಷ್ ನಾಯಕ್ ಕನ್ಯಾನ, ಪಕ್ಷದ ಪ್ರಮುಖರಾದ ನಿಲೇಶ್ ಪೂಜಾರಿ ಹರೀಶ್ ಶೆಟ್ಟಿ ನಾಡ್ಪಾಲು ಮುಂತಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!