ಹೆಬ್ರಿ : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅನುಷ್ಠಾನ ಸಂಸ್ಥೆ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರದಲ್ಲಿ ವಿವಿಧ ಫಲಾನುಭವಿಗಳು ಭಾಗವಹಿಸಿದರು. ಶಿಬಿರದಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಫಿಸಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್ ಅಗತ್ಯ ತಪಾಸಣೆ ಹಾಗೂ ಚಿಕಿತ್ಸಾ ಸೇವೆಗಳನ್ನು ಒದಗಿಸಿದರು. ಚಿಕಿತ್ಸೆಯ ನಿರಂತರತೆ ಹಾಗೂ ಮನೆ ಆಧಾರಿತ ಚಿಕಿತ್ಸಾ ಚಟುವಟಿಕೆಗಳ ಕುರಿತು ಫಲಾನುಭವಿಗಳಿಗೆ ಮತ್ತು ಪೋಷಕರಿಗೆ ಮಾರ್ಗದರ್ಶನ ನೀಡಲಾಯಿತು.
ಶಿವಪುರ, ಹೆಬ್ರಿ ಗ್ರಾಮ ಪಂಚಾಯತಿ ವಿಆರ್‌ಡಬ್ಲ್ಯೂ ಹಾಗೂ ಎಂಆರ್‌ಡಬ್ಲ್ಯೂ ಮತ್ತು ಹೆಬ್ರಿ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.



