Saturday, November 7, 2026
Homeಹೆಬ್ರಿ ಗ್ರಾಮ ಪಂಚಾಯತ್‌“ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀ ಅನಂತ ಪದ್ಮನಾಭ ದೇವಾಲಯದ ಶಾಸನ ಪ್ರಾತ್ಯಕ್ಷಿಕೆ  ಮತ್ತು...

“ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀ ಅನಂತ ಪದ್ಮನಾಭ ದೇವಾಲಯದ ಶಾಸನ ಪ್ರಾತ್ಯಕ್ಷಿಕೆ  ಮತ್ತು ಅಧ್ಯಯನ ”

ಹೆಬ್ರಿ : ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಶ್ರೀ ಅನಂತ ಪದ್ಮನಾಭ ದೇವಾಲಯದ ಶಾಸನದ ವಿಶೇಷ ಉಪನ್ಯಾಸ ಕಾರ್ಯಕ್ರಮ ಬುಧವಾರ ಹೆಬ್ರಿ ಶ್ರೀ ಅನಂತ ಪದ್ಮನಾಭ ದೇವಾಲಯದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ವೈಶಾಲಿ ಜಿ. ಆರ್. ದೇವಾಲಯದ ಶಾಸನಗಳ ಐತಿಹಾಸಿಕ ಮಹತ್ವ, ಶಾಸನಗಳಲ್ಲಿರುವ ಮಾಹಿತಿಯ ಸ್ವರೂಪ, ಅವುಗಳ ಅಧ್ಯಯನ ವಿಧಾನ ಹಾಗೂ ಸ್ಥಳೀಯ ಇತಿಹಾಸದ ಅನಾವರಣದಲ್ಲಿ ಶಾಸನಗಳ ಪಾತ್ರದ ಕುರಿತು ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ಕೋಟೇಶ್ವರ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿಗಳಾದ ರಕ್ಷಿತಾ, ಸಂದೇಶ್ ಮತ್ತು ಕಿಶೋರ್ ಅವರು ಶಾಸನಗಳ ಪ್ರತಿರೂಪ ತಯಾರಿಸುವ ವಿಧಾನದ ಕುರಿತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಅರುಣಾಚಲ ಕೆ. ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜಸೇವಕ ಭಾಸ್ಕರ ಜೋಯಿಸ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಜ್ಯೋತಿ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕ ಗೋವಿಂದ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ದೇವಾಲಯದ ಅರ್ಚಕರಾದ ಮೋಹನ್ ರಾಜ್ ಜೋಯಿಸ್ ಮತ್ತು ಶ್ರೀಕರ ಭಾರದ್ವಾಜ್ ಭಾಗವಹಿಸಿದ್ದರು.

ಶಾಸನಗಳ ಅಧ್ಯಯನದ ಮೂಲಕ ಸ್ಥಳೀಯ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಅರಿಯಲು ವಿದ್ಯಾರ್ಥಿಗಳಿಗೆ ಕಾರ್ಯಕ್ರಮವು ಉತ್ತಮ ಅವಕಾಶ ಕಲ್ಪಿಸಿತು.

 

 

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!