Monday, November 9, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮ.

ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮ.

ಮುದ್ರಾಡಿ : ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕನ್ನಡ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಹೆಬ್ರಿ ಗ್ರಂಥಾಲಯದ ಗ್ರಂಥ ಪಾಲಕಿ ಪುಷ್ಪಾವತಿ ಹೆಬ್ರಿ ಕನ್ನಡ ಸುಂದರ ಭಾಷೆ, ಮಕ್ಕಳು ಕನ್ನಡದ ಉಚ್ಛಾರಣೆಯನ್ನು ಕನ್ನಡದ ನೆಲ ಜಲ ಸಂಸ್ಕೃತಿಯ ಬಗ್ಗೆ ತಿಳಿಸಿದರು.

ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಸನ್ನಕುಮಾರ್ ವಹಿಸಿದ್ದರು. ಉಪಾಧ್ಯಕ್ಷೆ ಸುರೇಖಾ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದಿಂದ ಆಯೋಜಿಸಿದ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಮಕ್ಕಳಿಂದ ಕನ್ನಡ ಗೀತಗಾಯನ ಕಾರ್ಯಕ್ರಮ ಜರುಗಿತು. ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಶ್ರೀನಿವಾಸ ಭಂಡಾರಿ ಸ್ವಾಗತಿ, ವಿಜಯ ಕಿಣಿ ವಂದಿಸಿ ಸತೀಶ್ ಬೇಳಂಜೆ ನಿರೂಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!