Wednesday, November 11, 2026
Homeಹೆಬ್ರಿ ಗ್ರಾಮ ಪಂಚಾಯತ್‌ಹೆಬ್ರಿ ತಾಲ್ಲೂಕಿನ ಸರಕಾರಿ ವ್ಯವಸ್ಥೆಯಲ್ಲಿನ ಅವ್ಯವಸ್ಥೆ : ಸಮಸ್ಯೆ ಪರಿಹಾರ ಆಗದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ...

ಹೆಬ್ರಿ ತಾಲ್ಲೂಕಿನ ಸರಕಾರಿ ವ್ಯವಸ್ಥೆಯಲ್ಲಿನ ಅವ್ಯವಸ್ಥೆ : ಸಮಸ್ಯೆ ಪರಿಹಾರ ಆಗದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ : ಕುಚ್ಚೂರು ಶ್ರೀಕಾಂತ್‌ ಪೂಜಾರಿ.

ಹೆಬ್ರಿ : ಹೆಬ್ರಿ ತಾಲ್ಲೂಕಿನ ಸರಕಾರಿ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯ ಬಗ್ಗೆ ಇತ್ತೀಚೆಗೆ ಪ್ರತಿಭಟನೆಯ ಮೂಲಕ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ಮೂಲಕ ಆಡಳಿತ ವರ್ಗದದ ಗಮನ ಸೆಳೆಯಲಾಗಿದೆ. ಜನಪರವಾದ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಸಮಸ್ಯೆ ಪರಿಹಾರ ಆಗದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆಯನ್ನು ನಡೆಸಿ ನಮ್ಮ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಲಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರರಾದ ಕುಚ್ಚೂರು ಶ್ರೀಕಾಂತ್‌ ಪೂಜಾರಿ ತಿಳಿಸಿದ್ದಾರೆ.

ಜನರಿಕೋಸ್ಕರ ನಡೆಸಿದ ಪ್ರತಿಭಟನೆಗೆ ಹೆಬ್ರಿ ತಹಶೀಲ್ಧಾರ್‌ ಮತ್ತು ಕುಂದಾಪುರ ಸಹಾಯಕ ಕಮೀಷನರ್‌ ಸ್ಥಳಕ್ಕೆ ಬಂದು ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ನಮಗೆ ಜನರ ಸಮಸ್ಯೆ ಬಗೆಹರಿಯಬೇಕು ಎಂದು ಎಂದು ಕುಚ್ಚೂರು ಶ್ರೀಕಾಂತ್‌ ಪೂಜಾರಿ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!