Thursday, November 12, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿಯಲ್ಲಿ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ 2026.

ಮುದ್ರಾಡಿಯಲ್ಲಿ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ 2026.

ಮುದ್ರಾಡಿ : ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಮತ್ತು ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಗುರುವಾರ 14 ವಯೋಮಾನದ ಹೆಬ್ರಿ ಕಾರ್ಕಳ ತಾಲ್ಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ 2026 ನಡೆಯಿತು. ರಾಜ್ಯದ ಗುರುನಾರಾಯಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ ಮಕ್ಕಳು ದೈಹಿಕವಾಗಿ ಮತ್ತು ಶೈಕ್ಷಣಿಕವಾಗಿ ಸಬಲರಾಗಲು ಕ್ರೀಡೆಯು ಉತ್ತಮವಾದ ಪಠ್ಯಪೂರಕವಾಗಿದೆ ಎಂದರು.

ಕಾರ್ಕಳ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ರವಿಚಂದ್ರ ಕಾರಂತ ಮಾತನಾಡಿದರು.

ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಂಗಳೂರು ಉಪಾಧ್ಯಕ್ಷ ರಾಜಾರಾಮ ಸರ್ವೇಗಾರ್, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಾರ್ಕಳದ ಅಧ್ಯಕ್ಷ ಸಂತೋಷ ಶೆಟ್ಟಿ,  ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಾರ್ಕಳದ ಅಧ್ಯಕ್ಷ ವಸಂತ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ಅನುದಾನಿತ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಾರ್ಕಳದ ಕಾರ್ಯದರ್ಶಿ ಅಣ್ಣಪ್ಪ,  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಾರ್ಕಳದ ಕಾರ್ಯದರ್ಶಿ ಜಯ ಶೆಟ್ಟಿ, ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕ ಆನಂದ ಪೂಜಾರಿ, ಮುದ್ರಾಡಿ ಕ್ಲಸ್ಟರ್ ಸಿ.ಆರ್.ಪಿ ರಾಘವೇಂದ್ರ ಆಚಾರ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಸನ್ನ ಕುಮಾರ್, ಉಪಾಧ್ಯಕ್ಷೆ ಸುರೇಖಾ ಶೆಟ್ಟಿ, ಮುದ್ರಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸುಮಲತಾ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ‌ ಶ್ರೀನಿವಾಸ ಭಂಡಾರಿ ಸ್ವಾಗತಿಸಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸತೀಶ್ ನಾಯ್ಕ ಎಸ್ ನಿರೂಪಿಸಿದರು. ಸುಮಲತಾ ವಂದಿಸಿದರು.

ಬಾಲಕ ಬಾಲಕಿಯರ ಒಟ್ಟು ‌ತಂಡಗಳು ಭಾಗವಹಿಸಿದವು.ಅಧ್ಯಾಪಕ ವೃಂದ, ಅಧ್ಯಕ್ಷರು ಮತ್ತು ಸರ್ವಸದಸ್ಯರು ಎಸ್.ಡಿ.ಎಂ.ಸಿ, ಹಳೆ ವಿದ್ಯಾರ್ಥಿಗಳು, ಪೋಷಕರು,ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!